ಬೆಂಗಳೂರು: ಇಬ್ಬರು IPS ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ (State government) ಆದೇಶ ಹೊರಡಿಸಿದೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಲ್ಯ ಬಾಕಿ ಇದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಸರ್ಕಾರದಿಂದ ಅಧಿಕಾರಿಗಳ ವರ್ಗಾವಣೆ ಕಾರ್ಯ ನಡೆಯುತ್ತಿದೆ.