ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಬಲ ಪಡಿಸುವ ಜೊತೆಗೆ ಅಭ್ಯರ್ಥಿಗಳ ಗೆಲುವಿಗೆ ಕೇಂದ್ರ ಸಚಿವ(Pralhad joshi) ಪ್ರಹ್ಲಾದ ಜೋಶಿ ಶತಾಯು ಗತಾಯು ಹೋರಾಟ ನಡೆಸಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರ ಹಾಗೂ ಬಿಜೆಪಿ ನಾಯಕರ ಜೊತೆಗೆ ಸಭೆ ನಡೆಸುವ ಮೂಲಕ ಹೊಸ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹೌದು.. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯ, ಜೆ.ಸಿ.ನಗರದಲ್ಲಿರುವ ಮಾಧ್ಯಮದ ಕೇಂದ್ರದಲ್ಲಿ ಸಭೆ ನಡೆಸುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ,
ಒಂದಿಲ್ಲೊಂದು ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಿರ್ಧಾರ ಮಾಡಿದ್ದಾರೆ. ಅಲ್ಲದೇ ಹುಬ್ಬಳ್ಳಿಗೆ ಆಗಮಿಸಿದ ಜೋಶಿಯವರು, ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಇನ್ನೂ ಕಾರ್ಯಕರ್ತರಲ್ಲಿ ಜವಾಬ್ದಾರಿ ವಹಿಸುವ ಮೂಲಕ ಮತದಾರರನ್ನು ಜಾಗೃತರನ್ನಾಗಿ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಮಹೇಶ ಟೆಂಗಿನಕಾಯಿ, ಸಚಿವ ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಬಹುತೇಕ ನಾಯಕರು ಭಾಗವಹಿಸಿದ್ದರು.