ಬೆಂಗಳೂರು: ಹಸಿರು ಸಂರಕ್ಷಣೆಯ ಪ್ರಚಾರದ ಉದ್ದೇಶದಿಂದ (RCB )ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್(RR) ಎದುರು ಹಸಿರು(Green) ಜೆರ್ಸಿ ತೊಟ್ಟು ಕಣಕ್ಕಿಳಿದಿದೆ. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 32ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.
ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿದೆ. ಇನ್ನು ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿಯೇ ಆರ್ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆರ್ಸಿಬಿ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದ್ದು, ವೇಯ್ನ್ ಪಾರ್ನೆಲ್ ಬದಲಿಗೆ ಡೇವಿಡ್ ವಿಲ್ಲಿ ತಂಡ ಕೂಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕೂ ಫೀಲ್ಡಿಂಗ್ ಮಾಡಲು ಫಾಫ್ ಡು ಪ್ಲೆಸಿಸ್ ಸಂಪೂರ್ಣ ಫಿಟ್ ಆಗದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ, ಆರ್ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಆದರೆ ಇಂಪ್ಯಾಕ್ಟ್ ಆಟಗಾರನ ರೂಪದಲ್ಲಿ ಫಾಫ್ ಡು ಪ್ಲೆಸಿಸ್ ಅರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಎರಡೂ ತಂಡಗಳಲ್ಲಿ ಬಲಿಷ್ಠ ಬ್ಯಾಟರ್ಗಳಿದ್ದು, ಬ್ಯಾಟರ್ಗಳ ಸ್ವರ್ಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ರನ್ ಹೊಳೆ ಹರಿಯುವ ನಿರೀಕ್ಷೆ ಇದೆ. ಒಂದು ಕಡೆ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿ, ಗ್ಲೆನ್ ಮ್ಯಾಕ್ಸ್ವೆಲ್ ಇದ್ದರೆ ಮತ್ತೊಂದು ಪಡೆ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಶಿಮ್ರೊನ್ ಹೆಟ್ಮೇಯರ್ರಂತಹ ಘಟಾನುಘಟಿಗಳಿದ್ದರೆ. ಹೀಗಾಗಿ ಎರಡೂ ತಂಡಗಳ ಬೌಲರ್ಗಳು ಒತ್ತಡದಲ್ಲೇ ಕಣಕ್ಕಿಳಿಯಬೇಕಾಗಬಹುದು.