ಬೆಂಗಳೂರು: ರಾಜಧಾನಿ ಬೆಂಗಳೂರು (Bangalore)ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ(Rainfall) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ(Bangalore Rural), ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸ್ವಲ್ಪ ಬಿಸಿಲಿನ ಪ್ರಮಾಣ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಕಾರಣ ಬೆಂಗಳೂರು ಸೇರಿ ರಾಜ್ಯದ ಹಲವಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.