ಬೆಂಗಳೂರು: ನಾನು ಮತ್ತೆ ಸಿಎಂ ಆದರೆ ರಾಜ್ಯದಲ್ಲಿ ಅಮುಲ್(Amul) ಹಾಲು ಮಾರಾಟಕ್ಕೆ ಕಡಿವಾಣ ಹಾಕುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ(Okkaligas and Lingayats) ನೀಡಿದೆ. ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ,
ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದಲ್ಲಿ ಅಮುಲ್ ಪ್ರವೇಶದಿಂದ ನಂದಿನಿ ಉತ್ಪನ್ನಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ನಾನು ರಾಜ್ಯಕ್ಕೆ ಅಮುಲ್ ಪ್ರವೇಶವನ್ನು ವಿರೋಧಿಸುತ್ತೇನೆ, ನಾನು ಸಿಎಂ ಆದರೆ ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ , ಸಿಎಂ ಆದರೆ ಅಮುಲ್ ಹಾಲು ಖರೀದಿಸಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.