ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ(Karnataka Assembly Election) ಕೆಲವೇ ದಿನಗಳು ಬಾಕಿ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ರೌಡಿಶೀಟರ್ ಗಳ (Rowdysheeters in Bangalore)ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಾಗಲೇ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರದ ಅನೇಕ ರೌಡಿಶೀಟರ್ಗಳನ್ನ ಗಡಿಪಾರು ಮಾಡಲಾಗಿದೆ. ಇದೀಗ ಬೆಂಗಳೂರು ಪೂರ್ವ ವಿಭಾಗ ಪೊಲೀಸರಿಂದ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಸ್ ಮನೆಗಳ ಮೇಲೆ ದಾಳಿ (Police Raid)ಮಾಡಲಾಗಿದ್ದು,
ರೌಡಿಶೀಟರ್ ಆಸಿಫ್ ಮನೆಯಲ್ಲಿ 105 KG ಗಾಂಜಾ, ಮಾರಕಾಸ್ತ್ರವನ್ನ ವಶಕ್ಕೆ ಪಡೆಯಲಾಗಿದೆ. ಜೊಲ್ಲು ಇಮ್ರಾನ್, ಅನಿಸ್, ಅಬ್ಬಾಸ್, ಸಾಧಿಕ್, ಶಾಕಿರ್, ಇರ್ಫಾನ್, ಯೂಸೂಫ್ ಸೇರಿ 100 ರೌಡಿಶೀಟರ್ಗಳ ಮನೆಗಳ ಮೇಲೆ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಮನೆಗಳಲ್ಲಿದ್ದ ಡ್ರಗ್ಸ್, ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.