ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಪೂಜೆ ಮಾಡಲಿ, ನಾವೂ ಪೂಜೆ ಮಾಡುತ್ತೇವೆ. ಕೊನೆಗೆ ದೇವರು ಯಾರಿಗೆ ಆಶೀರ್ವಾದ ಮಾಡುತ್ತಾನೆ ನೋಡೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಡಿ ಕೆ ಶಿವಕುಮಾರ್ ಅವರ ಪೂಜೆ ಅವರು ಮಾಡಲಿ, ದೇವರು ಯಾರಿಗೆ ಆಶೀರ್ವಾದ ಮಾಡುತ್ತಾನೆ ಎಂಬುದು ಮೇ.13 ರಂದು ಗೊತ್ತಾಗಲಿದೆ. ಡಿ ಕೆ ಶಿವಕುಮಾರ್ ಅವರೇ ಭಾವನೆಗಳ ಜೊತೆಗೆ ಆಟವಾಡುತ್ತಾರೆ. ಲಿಂಗಾಯತ ಡ್ಯಾಂ ಹಾಗೂ ಲಿಂಗಾಯತ ಸರೋವರ ಇವೆಲ್ಲ ಭಾವನೆಗಳು. ಹೀಗಾಗಿ, ಡಿ ಕೆ ಹೇಳುವುದೊಂದು ಮಾಡುವುದು ಇನ್ನೊಂದು. ಅವರ ಮಾತನ್ನ ಸಿರಿಯಸ್ಸಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.
ಇನ್ನು, ಎಐಸಿಸಿ ನಾಯಕ ರಾಹುಲ್ ಗಾಂಧಿ ಲಿಂಗಾಯತ ಮಠಕ್ಕೆ ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಅವರು ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅದಕ್ಕೆ ಧನ್ಯವಾದಗಳು ಎಂದಿದ್ದಾರೆ. ಹಿಂದೆ ಸಿಎಂ ಆಗಬೇಕು ಎಂದು ನಾನು ಅಂದುಕೊಂಡರಲಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದ್ದು. ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿಯ ಬೆಳವಣಿಗೆಗಳನ್ನ ಹೈಕಮಾಂಡ್ ಗಮನಿಸುತ್ತಿದೆ. ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಕಾಂಗ್ರೆಸ್ ನವರು ಎಂದಿದ್ದಾರೆ.
ಇನ್ನು, ಲಿಂಗಾಯತ ಸಿಎಂ ಭ್ರಷ್ಟಾಚಾರದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಯಿ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಹೇಳಿಕೆ ಬಳಿಕ ಲಿಂಗಾಯತ ಮತಗಳು ಕಳೆದ ಬಾರಿಗಿಂತ ಈ ಬಾರಿ ನಮಗೆ ಹೆಚ್ಚಾಗಲಿವೆ. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ಸವದಿ, ಶಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ. ಎಲ್ಲಾ ಪದವಿ ಪಡೆದು ನಂತರ ಕಾಂಗ್ರೆಸ್ ಗೆ ಹೋಗಿದ್ದಾರೆ. ಇವರನ್ನ ಜನರು ಒಪ್ಪುವುದಿಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಈ ಬಾರಿ ನೂರಕ್ಕೆ ನೂರು ಬಿಜೆಪಿಯ ಸರ್ಕಾರ
ಹರಿಹರದಲ್ಲಿ ಬಿಜೆಪಿಯ ಸುನಾಮಿ ಬೀಸಿದೆ. ಚುನಾವಣೆಯ ಕಾವು ಏರುತ್ತಿದೆ. ನಾನು ರಾಜ್ಯದ ಉದ್ದಗಲಕ್ಕೂ ಪ್ರಯಾಣ ಬೆಳೆಸಿದ್ದೇನೆ. ಈ ಬಾರಿ ಬಿಜೆಪಿಯ ಸರ್ಕಾರ ನೂರಕ್ಕೆ ನೂರು ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.