ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ(Karnataka Election) ಕೆಲವೇ ದಿನಗಳು ಬಾಕಿ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ (Bangalore) ರೌಡಿ ಶೀಟರ್ ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಾಗಲೇ ನಗರದ ಹಲವೆಡೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಇಂದು ಕೂಡ ಮುಂದುವರಿಸಿದ್ದಾರೆ. ಅದರ ಭಾಗವಾಗಿ ನಗರದ ಪೂರ್ವ ವಿಭಾಗದಲ್ಲಿ ಡಿಸಿಪಿ ಭೀಮಾಶಂಕರ್ ಗುಳೇದ್(DCP Bhimashankar Guled) ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು,
ರೌಡಿಶೀಟರ್ ಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ದಾಳಿ ವೇಳೆ ಗಾಂಜಾ ಸೇರಿ ಕೆಲ ವಸ್ತುಗಳನ್ನು ಸೀಜ್ ಮಾಡಲಾಗಿದ್ದು, ಚುನಾವಣೆ ಹೊತ್ತಲ್ಲಿ ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನೂ 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಇದ್ದು, ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.