ಬೆಂಗಳೂರು: ಇಬ್ಬರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ (Bangalore) ಬೆಂಗಳೂರಿನ ಗಿರಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರ ಮೂಲದ ಸೈಯದ್ ಬಾಷ, ಶೇಖ್ ಅಯೂಬ್ ಬಂಧಿತರು ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಸೈಯದ್ ಬಾಷಾ ದೇಹದಾರ್ಡ್ಯ (Body builder) ಪಟುವಾಗಿದ್ದ. ನಂತರ ಶೇಖ್ ಅಯೂಬ್ ಜೊತೆ ಸೇರಿ ಕಳ್ಳತನದ ಹಾದಿ ಹಿಡಿದಿದ್ದ. ಇನ್ನೂ ಆಂಧ್ರದಲ್ಲಿ ಬಂಧಿತರ ಮೇಲೆ 32 ಪ್ರಕರಣ ದಾಖಲಾಗಿರುವುದು ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಜೈಲಿಗೆ ಹೋದರೂ ಬುದ್ದಿ ಕಲಿಯದ ಆರೋಪಿಗಳು,
ಬೇಲ್ ಮೇಲೆ ಹೊರ ಬಂದು ಬೆಂಗಳೂರಿನಲ್ಲಿ (Bangalore)ಕೈಚಳಕ ತೋರುತ್ತಿದ್ದರು. ಐಷಾರಾಮಿ ಜೀವನ ನಡೆಸಲು(Theft) ಸರಗಳ್ಳತನಕ್ಕೆ ಇಳಿದಿದ್ದರು. ಬೈಕಲ್ಲಿ ಬಂದು ಸರ ಎಗರಿಸಿ ಪರಾರಿಯಾಗುತ್ತಿದ್ದರು. ಅದೇ ರೀತಿ ಕಳೆದ ತಿಂಗಳು ಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ್ದರು. ಇದೇ ರೀತಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದರು. ಇದೀಗ ಆರೋಪಿಗಳು ಅರೆಸ್ಟ್ ಮಾಡಿದ್ದು, ಆರೋಪಿಗಳಿಂದ 6 ಲಕ್ಷ ಮೌಲ್ಯದ ಚಿನ್ನದ ಸರಗಳು,ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ ಸೀಜ್ ಮಾಡಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.