ವಾಷಿಂಗ್ಟನ್: ವಿಮಾನ ಹಾರಾಟದ ವೇಳೆ ವಿಮಾನದ ಎಂಜಿನ್ ಗೆ ಪಕ್ಷಿ ತಾಗಿದ ಪರಿಣಾಮ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅಮೆರಿಕನ್ ಏರ್ಲೈನ್ಸ್ನ ವಿಮಾನವೊಂದು ಟೇಕ್ಆಫ್ ಆದ ಕೆಲವೇ ಹೊತ್ತಿನಲ್ಲಿ ಅದರ ಎಂಜಿನ್ನಲ್ಲಿ ಬೆಂಕಿ ಗೋಚರಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನು ತಕ್ಷಣವೇ ಕೊಲಂಬಸ್ನ ಜಾನ್ ಗ್ಲೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.
ವರದಿಗಳ ಪ್ರಕಾರ ಬೋಯಿಂಗ್ 737 ಫ್ಲೈಟ್ 1958 ಕೊಲಂಬಸ್ನಿಂದ ಫೀನಿಕ್ಸ್ಗೆ ಹೊರಟಿತ್ತು. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಹಕ್ಕಿ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆಯೇ ಎಚ್ಚೆತ್ತ ಪೈಲಟ್ಗಳು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.