ಬೆಂಗಳೂರು: 2023 ರ ಕರ್ನಾಟಕ ವಿಧಾನಸಭೆ ಚುನಾವಣಾ ಕಾವು ದಿನೇ ದಿನೇ ರಂಗೇರುತ್ತಿದೆ. ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಜೆಡಿಎಸ್ ಅಭ್ಯರ್ಥಿಯಾದ ಇಮ್ರಾನ್ ಪಾಷಾ ಅವರ ಪರವಾಗಿ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಚುನಾವಣೆಯ ಕುರಿತಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತಂದು ಕುಮಾರಣ್ಣನ ಸಿಎಂ ಮಾಡಬೇಕು. ಭ್ರಷ್ಟಾಚಾರದಲ್ಲಿ ಮುಳುಗಿರುವ ಈಗಿನ ಸರ್ಕಾರವನ್ನ ತೊಲಗಿಸಿ, ಈ ಬಾರಿ ಜೆಡಿಎಸ್ ಅಧಿಕಾರಕ್ಕೇ ತರಲೇಬೇಕು ಎಂದು ಹೇಳಿದರು.