ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವ ಭಾರತೀಯ ಜನತಾ ಪಾರ್ಟಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಭದ್ರಪಡಿಸಲು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ರಾಜ್ಯ ನಾಯಕರ ತಂಡ ಹುಬ್ಬಳ್ಳಿಗೆ ಲಗ್ಗೆ ಇಡುತ್ತಿದೆ.
ಹೌದು.. ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ಗೆ ಆಗಮಿಸಿದ್ದಾರೆ.ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ತಂಗಿರುವ ಅಮಿತ್ ಶಾ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.
ಇನ್ನೂ ಬೆಳಗ್ಗೆಯಿಂದಲೂ ಕೇಂದ್ರ ಸಚಿವ ಅಮಿತ್ ಶಾ ಕಾರ್ಯಕರ್ತರ ಹಾಗೂ ನಾಯಕರ ಜೊತೆಗೆ ಗೌಪ್ಯ ಸಭೆ ನಡೆಸುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಪ್ರಮುಖರ ಸಭೆಯಲ್ಲಿ ಭಾಗಿಯಾಗಿದ್ದಾರೆ.