ರಾಯಚೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಮಹಾಪ್ರಚಾರ ಅಭಿಯಾನ ಮಾಡಲಾಗುತ್ತಿದೆ ಎಂದು ರಾಯಚೂರಿನಲ್ಲಿ ಕೇಂದ್ರ ಕೇಂದ್ರ ಬುಡಕಟ್ಟು ಜನಾಂಗದ ಸಚಿವ ಅರ್ಜುನ್ ಮುಂಡಾ ಹೇಳಿದರು.
ಬುಡಕಟ್ಟು ಜನಾಂಗದ ಮಹಿಳೆಯೊಬ್ಬರಿಗೆ ದೇಶದ ರಾಷ್ಟ್ರಪತಿ ಮಾಡಿದ್ದು ಮೋದಿ ಸರ್ಕಾರ, 25 ಕೋಟಿ ಜನರು ಮೋದಿ ಮನ್ ಕೀ ಬಾತ್ ಕೇಳಿಸಿಕೊಳ್ಳುತ್ತಿದ್ದಾರೆ. ದೇಶದ ಅಭಿವೃದ್ಧಿ ಬಗ್ಗೆ ಈಗ ಇಡೀ ವಿಶ್ವವೇ ಮಾತನಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳು ನಡೆದಿವೆ.
ಡಬಲ್ ಎಂಜಿನ್ ಸರ್ಕಾರ ರಾಜ್ಯಕ್ಕೆ ಬೇಕಾದ ಸಹಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸ್ವಯಂ ಉದ್ಯೋಗ ನೀಡುವುದು. ಎಲ್ಲರಿಗೂ ಮನೆ ಕೊಡಲು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮಾಡಲಾಗಿದೆ. ರಾಜ್ಯ ಸರ್ಕಾರವೂ ಪರಿಶಿಷ್ಟ ಪಂಗಡ- ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹೆಚ್ಚಳ ಮಾಡಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿದೆ ಎಂದು ಅರ್ಜುನ್ ಮುಂಡಾ ಹೇಳಿದರು.