ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಯೊಬ್ಬರೂ ಅಸಮಾಧಾನಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK shivkumer) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ (bangalore)ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಕೇಂದ್ರ ಸಚಿವ ಅಮಿತ್ ಶಾ ಮಾತಾಡಿದ್ದಾರೆ. ಆದರೆ ತಮಿಳುನಾಡಿನಲ್ಲಿ (tamilnadu) ಮೀಸಲಾತಿ ಪ್ರಮಾಣ ಯಾವ ರೀತಿ ಹೆಚ್ಚಳವಾಗಿದೆ. ಶೇಕಡಾ 2ರಷ್ಟು ಹೆಚ್ಚುವರಿ ಮೀಸಲಾತಿ ಕೊಡಿ ಎಂದು ಕೇಳಿರಲಿಲ್ಲ.
ಮುಸ್ಲಿಂ ಸಮುದಾಯ ಮೀಸಲಾತಿ ಕಿತ್ತು ಲಿಂಗಾಯತ, ಒಕ್ಕಲಿಗರು ಮೀಸಲಾತಿ ಕೊಡಿ ಎಂದು ಕೇಳಿರಲಿಲ್ಲ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಸಮಾಧಾನ ಆಗದಂತೆ ಮಾಡಿದೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿಯೊಬ್ಬರೂ ಅಸಮಾಧಾನಗೊಂಡಿದ್ದಾರೆ ಎಂದರು. ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಇಲಾಖೆ ಆರಂಭಿಸುತ್ತೇವೆ. ಹೂಡಿಕೆಗೆ ಅವಕಾಶ ಮಾಡಿಕೊಡಲು ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.