ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ (Doctor Negligence) ಮೂರು ವರ್ಷದ ಮಗು ಸಾವನ್ನಪ್ಪಿರುವ ಆರೋಪ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ (Baptist hospital, Hebbal) ವಿರುದ್ಧ ಕೇಳಿ ಬಂದಿದೆ. ಬುಧವಾರ ಮಧ್ಯಾಹ್ನ ಜ್ವರವಿದ್ದ ಕಾರಣ ಮಗುವನ್ನು ಪೋಷಕರು ಮೊದಲಿಗೆ ಯಲಹಂಕದ (Yelhanka) ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸುಮಾರು ಒಂದು ಗಂಟೆಗಳ ಕಾಲ ಶುಶ್ರೂಷಾ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಬೇರೆ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ವೈದ್ಯರ ಸೂಚನೆ ಮೇರೆಗೆ ಪೋಷಕರು (Parents) ಮಗುವನ್ನು ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ 9 ಗಂಟೆ ವೇಳೆಗೆ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.ಜ್ವರ ಎಂದು ಕರೆದುಕೊಂಡ ಬಂದು ಮಗು ಹೇಗೆ ಸಾವನ್ನಪ್ಪಿತು ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.