ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ (Karnataka Rains)ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ (Meteorological department forecast)ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಆಗುವ ಕಾರಣಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲಿನ ಸುಳಿಗಳು ಸೈಕ್ಲೋನ್ ರೂಪ ಪಡೆದುಕೊಳ್ಳಬಹುದು. ಈ ಕಾರಣದಿಂದ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.