ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸಿಇಟಿ (CET Exam)ಬರೆಯಲು ಕರ್ನಾಟಕ ಪರೀಕ್ಷಾ (KEA) ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಮೇ 20, 21 ರಂದು ಸಿಇಟಿ -0ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವವರು ಕೂಡ ಸಿಇಟಿ ಬರೆಯಬೇಕಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ ಬರೆಯಲು ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.
ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತೆಗೆದುಕೊಂಡಿದ್ದು, ಇಂತಹ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ. ಸಿಇಟಿಗೆ ಹಾಜರಾದರೆ ಮಾತ್ರ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.