ಧಾರವಾಡ: ಲೋಕಾಯಕ್ತ ಬಲೆಗೆ ಬಿದ್ದಿದ್ದ ಭೂಮಾಪನಾ ಅಧಿಕಾರಿಗೆ ಧಾರವಾಡದ ಮೂರನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದೆ. ಕಳೆದ 2018ರಲ್ಲಿ ರಮೇಶ್ ಡವಳಗಿ ಎಂಬ ಭೂಮಾಪನಾ ಅಧಿಕಾರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ಜಮೀನು ಸರ್ವೇಗಾಗಿ ರೈತನಿಂದ 4 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ.
ಈ ಹಿನ್ನೆಲೆಯಲ್ಲಿ ಅಧಿಕಾರಿಯ ವಿರುದ್ಧ ನ್ಯಾಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈಗ ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದ್ದು, ಆರೋಪಿತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರಾರು ದಂಡ ವಿಧಿಸಿ ಆದೇಶ ಹೊರಡಿಸಿದೆ.