ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಸೋಲಿನ ಹತಾಶೆ ಕಂಡು ಬಂದ ಹಿನ್ನೆಲೆ ಪ್ರಧಾನಿ ಬಾಯಲ್ಲೂ ಕಾಂಗ್ರೆಸ್ ಗ್ಯಾರಂಟಿಯದ್ದೇ ಮಾತು ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Sivakumar) ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಸುಳ್ಳು, ಅವು ಮುಂದಿನ ಪೀಳಿಗೆಗೆ ಮಾರಕ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತರ ಸಭೆಯಲ್ಲಿ ಹೇಳಿರುವುದರ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಉತ್ತರಿಸಿದರು. ‘
‘ಪ್ರಧಾನಮಂತ್ರಿಗಳಿಗೆ ಬಿಜೆಪಿ ಭರವಸೆಗಳ ಬಗ್ಗೆ ಗೊತ್ತಿಲ್ಲವೇ. ನಾವು ಬಿಜೆಪಿಯವರಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ನಾವು ಹೇಳಿಲ್ಲ. ಬಿಜೆಪಿ ಪ್ರಣಾಳಿಕೆ ತೆಗೆದು ನೋಡಿ. ಅವರು 1 ಲಕ್ಷದವರೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರ ಪಂಪ್ಸೆಟ್ಗೆ ನೀಡುವ ವಿದ್ಯುತ್ ಅನ್ನು 7 ತಾಸಿನಿಂದ 10 ತಾಸಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಜನವರಿ 16ರಂದು ಬೊಮ್ಮಾಯಿ ಅವರ ಸರ್ಕಾರ ಪತ್ರಿಕೆಗಳಿಗೆ ಕೊಟ್ಟಿರುವ ಜಾಹೀರಾತು ನೋಡಿ.