ಮಹದೇವಪುರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಿ ಜನಮನ್ನಣೆ ಪಡೆದುಕೊಂಡಿದ್ದು, ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅಭಿಪ್ರಾಯಪಟ್ಟರು.
ಹಗದೂರು ಮತ್ತು ಗಾಂಧಿಪುರದಲ್ಲಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಶಾಸಕ ಅರವಿಂದ ಲಿಂಬಾವಳಿಯವರ ಪಕ್ಷ ಸಂಘಟನೆ, ಅಭಿವೃದ್ಧಿ ಕಾರ್ಯವೈಖರಿಯನ್ನ ಮೆಚ್ಚಿ ಕಾಂಗ್ರೆಸ್ನ ಮಾಜಿ ತಾಲೂಕು ಪಂಚಾಯತಿ ಸದಸ್ಯ ಜಿ.ಎಂ.ನಾರಾಯಣ್, ಹಿರಿಯ ಕಾಂಗ್ರೆಸ್ ಮುಖಂಡರಾದ ಎಚ್. ಕೆ.ನಾರಾಯಣಸ್ವಾಮಿ, ರಘು ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಅರವಿಂದ ಲಿಂಬಾವಳಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿಯವರು,ನರೇಂದ್ರ ಮೋದಿ ಅವರು ಕಳೆದ 9 ವರ್ಷಗಳಲ್ಲಿ ಕಳಂಕ ರಹಿತ ಆಡಳಿತ ನೀಡುವ ಮೂಲಕ, ಭಾರತೀಯ ಜನತಾ ಪಾರ್ಟಿಗೆ ಗೌರವ ತಂದು ಕೊಟ್ಟಿದ್ದಾರೆ. ಹೀಗಾಗಿ, ಇಂದಿಗೂ ಸಹ ದೇಶದ ಜನತೆ ಭಾರತೀಯ ಜನತಾ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕುತ್ತಿದ್ದು, ಇಂದಿಗೂ ಸಹ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚಾಗಿತ್ತಿದೆ ಎಂದರು.ಅದೇ ರೀತಿ ಕಳೆದ ಹದಿನೈದು ವರ್ಷಗಳ ಕಾಲ ಮಹದೇವಪುರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಒತ್ತು ನೀಡಿದ್ದು ಸಾವಿರಾರು ಕೋಟಿ ಅನುದಾನವನ್ನು ನೀಡಿ ಸಮಗ್ರ ಬೆಳವಣಿಗೆಗೆ ಕೈ ಜೋಡಿಸಿದೆ ಎಂದರು.
ಪಕ್ಷದ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿಯವರನ್ನ ಗೆಲ್ಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅದ್ಯಕ್ಷ ಮನೋಹರ್ ರೆಡ್ಡಿ, ಹರಿಶ್,ರಾಘವೇಂದ್ರ, ಪ್ರಕಾಶ್,ಮುನೇಗೌಡರು,ಕೆ ರವಿ ಮತ್ತಿತರರು ಇದ್ದರು.