ಬೆಂಗಳೂರು: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ (Thunderstorms in 48 hours)ಎಂದು ಹವಾಮಾನ ಇಲಾಖೆ ಮುನ್ಸೂಚನೆ(Meteorological department forecast) ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, (Chikmagalur, Hassan, Kodagu,)ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ರಾಯಚೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ಕೆಂಭಾವಿ, ಇಳಕಲ್, ಶೋರಾಪುರ, (Kembavi, Ilakal, Shorapur) ಸಂತೆ ಬೆನ್ನೂರು, ಕಾಟಿಕೆರೆ, ಯುಗಟಿ, ಕುರ್ಡಿ, ಮಾನ್ವಿ, ಗಬ್ಬೂರು, ಮಂಠಾಳ, ಕವಡಿಮಟ್ಟಿ, ಶಹಾಪುರ, ಜೇವರ್ಗಿ, ದೇವರಹಿಪ್ಪರಗಿ, ನಾಯಕನಹಟ್ಟಿ, ಮುದಗಲ್, ದೇವದುರ್ಗ, ತಾವರಗೆರೆ, ಯಲಬುರ್ಗಾ, ನಾಲ್ವತವಾಡ, ನಿಟ್ಟೂರು, ಕಕ್ಕೇರಿ, ಯದ್ರಾಮಿ, ಭಾಗಮಂಡಲ, ಶೃಂಗೇರಿ, ಕೊಪ್ಪ, ತರೀಕೆರೆ, ಅಜ್ಜಂಪುರ, ಎನ್ಆರ್ಪುರ, ಹೊಸ ಪೇಟೆ, ಶಿವಮೊಗ್ಗ, ಚನ್ನಗಿರಿ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು(Cloudy weather forming), ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.