ಬೆಂಗಳೂರು: ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ(Yeshavantpur Police Station, Bangalore) ಸಚಿವ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ (Kusuma Hanumantarayappa)ಅವರು ದೂರು ನೀಡಿದ್ದಾರೆ. ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಎದುರಾಳಿ ಬಿಜೆಪಿ ಅಭ್ಯರ್ಥಿ ಸಚಿವ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ(Yeshavantpur Police Station) ದೂರು ಸಹ ದಾಖಲಿಸಿದ್ದಾರೆ. ಸಚಿವ ಮುನಿರತ್ನ ಅವರು ತಮ್ಮ ಬೆಂಬಲಿಗನನ್ನೇ ಚುನಾವಣೆ ಕಣಕ್ಕೆ ಇಳಿಸಿ ತಮ್ಮ ವಿರುದ್ಧ ಷಡ್ಯಂತ್ರ ರಚನೆ ಮಾಡಿದ್ದಾರೆ ಎಂದು ಕುಸುಮಾ ಹೆಚ್. ಆರೋಪಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಕುಸುಮಾ ಅವರು ಬರೆದುಕೊಂಡಿದ್ದಾರೆ.
ಆರ್ಆರ್ ನಗರ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಿರುವ ಯಾರಬ್ಎಂಬವರು ಸಚಿವ ಬೆಂಬಲಿಗ. ಆದ್ರೆ ಕ್ಷೇತ್ರದಲ್ಲಿ ತಾನೋರ್ವ ಕಾಂಗ್ರೆಸ್ ಬೆಂಬಲಿತನಾಗಿದ್ದು ಎಂದು ಹೇಳಿಕೊಂಡು ಪಾಕಿಸ್ತಾನ ಧ್ವಜ ಇರೋ ಕರಪತ್ರ ಮುದ್ರಿಸಿ ಹಂಚುತ್ತಿದ್ದಾರೆ ಎಂದು ಕುಸುಮಾ ಆರೋಪ ಮಾಡಿದ್ದಾರೆ. ಪಾಕಿಸ್ತಾನ ಧ್ವಜ ಮುದ್ರಣದ ಕರಪತ್ರ ಹಂಚಿ ಕಾಂಗ್ರೆಸ್ ಬೆಂಬಲಿಸಿ ಯಾರಬ್ ಪ್ರಚಾರ ಮಾಡುತ್ತಿದ್ದಾರೆ. ಬೆಂಬಲಿಗನನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಡಿ, ತಮ್ಮ ವಿರುದ್ದ ಷಡ್ಯಂತ್ರ ರೂಪಿಸಲಾಗಿದೆ. ಪಾಕಿಸ್ತಾನ ಧ್ವಜವುಳ್ಳ ಕರಪತ್ರ ಹಂಚುವ ಮೂಲಕ ಕ್ಷೇತ್ರದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗುತ್ತಿದ್ದಾರೆ ಎಂದು ಕುಸುಮಾ ದೂರಿನಲ್ಲಿ ತಿಳಿಸಿದ್ದಾರೆ.