ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿವಿಧ ಜಾತಿಯ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಏಪ್ರಿಲ್ 28 ರಂದು ಕೌಲಾಲಂಪುರದಿಂದ ಎಕೆ 13 ವಿಮಾನದಲ್ಲಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಹಿಳೆಯ ಲಗೇಜ್ ಬಗ್ಗೆ ಅನುಮಾನಗೊಂಡು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಊಸರವಳ್ಳಿಯೊಂದಿಗೆ ವಿವಿಧ ಜಾತಿಯ 22 ಹಾವುಗಳು ಕಂಡುಬಂದಿವೆ.
ವನ್ಯಜೀವಿ ಸಂರಕ್ಷಣೆ ಕಾಯ್ದೆಯೊಂದಿಗೆ ಸರೀಸೃಪಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯನ್ನು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.