ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು (Prime Minister Modi) ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಯಿಂದ ದೆಹಲಿಗೆ ಮೋದಿ(Prime Minister Modi) ನಿರ್ಗಮಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು 7 ದಿನಗಳು ಮಾತ್ರ ಬಾಕಿ ಉಳಿದಿವೆ.
ಅಮೆರಿಕದ ಮೊದಲ ರಿಪಬ್ಲಿಕ್ ಬ್ಯಾಂಕ್ ಪತನ: 2 ತಿಂಗಳಲ್ಲಿ 3ನೇ ಬ್ಯಾಂಕ್ ದಿವಾಳಿ
ಈಗಾಗಲೇ ಪ್ರಬಲ ಮೂರು ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಹಾಗೇ ತಮ್ಮ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿವೆ. ಬಿಜೆಪಿಯ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಪ್ರಧಾನಿ ಮೋದಿಯವರು ಘೋಷವಾಕ್ಯದಂತೆ ಮೊಳಗಿಸುತ್ತಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ಯುವ ಮತದಾರರು ಮತ್ತು ರೈತರನ್ನು ಟಾರ್ಗೆಟ್ ಮಾಡಿದ್ದು, ಪ್ರತಿ ಸಮಾವೇಶದಲ್ಲಿ ಯುವಕರು ಮತ್ತು ರೈತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಹಾಗೇ ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ