ಪಾಕಿಸ್ತಾನ್: ಖೈಬರ್ ಪಖ್ತುಂಖ್ವಾದ ಪರ್ಚಿನಾರ್ ಶಾಲೆಯಲ್ಲಿ ನಡೆದ ಭಾರೀ ಗುಂಡಿನ ದಾಳಿಯಲ್ಲಿ ಏಳು ಶಿಕ್ಷಕರು ಮೃತಪಟ್ಟಿದ್ದಾರೆ. ಶಾಲೆಗೆ ನುಗ್ಗಿದ ಕೆಲ ಶಸ್ತ್ರಸಜ್ಜಿತ ವ್ಯಕ್ತಿಗಳು ಸಿಬ್ಬಂದಿಯ ಮೇಲೆ ಮನ ಬಂದಂತೆ ಗುಂಡು ಹಾರಿಸಲು ಆರಂಭಿಸಿದ್ದಾರೆ.
ಗುಂಡಿನ ದಾಳಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳನ್ನು ಬರೆಯುತ್ತಿದ್ದು, 7 ಶಿಯಾ ಶಿಕ್ಷಕರನ್ನ ಪರಾಚಿನಾರ್ನಲ್ಲಿ ಕೊಲ್ಲಲಾಗಿದೆ ಎಂದು ವರದಿಯಾಗಿದೆ.
ಇದುವರೆಗೆ ಯಾವುದೇ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇನ್ನು ಘಟನೆಯ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ, ಇದು ಭಯೋತ್ಪಾದನೆಗೆ ಸಂಬಂಧಿಸಿರಬಹುದು ಎಂದು ಹೇಳಿದರು.
ಪರಚಿನಾರ್, ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಏಕೈಕ ಶಿಯಾ ಬಹುಸಂಖ್ಯಾತ ಪಟ್ಟಣವಾಗಿದ್ದು, ಆಗಾಗ್ಗೆ ಭಯೋತ್ಪಾದಕ ದಾಳಿಗೆ ಗುರಿಯಾಗಿದೆ.