ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಮತ್ತೋರ್ವ ಜೋರಾಗಿದೆ. ಅದರಲ್ಲೂ ಮೋದಿ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಓಡಾಡುತ್ತಿದ್ದಾರೆ. ಮೇ 8ರಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದರಿಂದ ಮೋದಿ, ಕೊನೆ ಕ್ಷಣದಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ.
28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಸುಮಾರು 30ರಿಂದ 35 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಇಂದು ಹಾಗೂ ಮೇ 07(ಭಾನುವಾರ) ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದು, ಇಂದು ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ. ಯಾವೆಲ್ಲ ರಸ್ತೆಗಳು ಬಳಸಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಒಟ್ಟು 34 ರಸ್ತೆಗಳನ್ನು ಬಳಸದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದು, ಇಂದು (ಶನಿವಾರ) ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ರವರೆಗೆ ಬದಲಿ ರಸ್ತೆ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದೆ.
ಇಂದು (ಶನಿವಾರ) ಯಾವೆಲ್ಲ ರಸ್ತೆಗಳು ಬಂದ್?
- ರಾಜ ಭವನ ರಸ್ತೆ. ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮಾರಾಜಪೇಟೆ ಮುಖ್ಯ ರಸ್ತೆ.
ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ. - ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆ.
ಈ ಮೇಲಿನ ರಸ್ತೆಗಳನ್ನು ಬಳಸದೆ ಬೇರೆ ಪರಿಯಾಗ ಮಾರ್ಗ ಗಳನ್ನು ಬಳಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.