ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (KSRTC) ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ (Voting) ಪ್ರಕ್ರಿಯೆ ನಡೆಯುವ ಹಿನ್ನೆಲೆ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್ಆರ್ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
10ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜಿಸಲಾಗಿದೆ. ಪರಿಣಾಮ 9 ಮತ್ತು 10 ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್ಆರ್ಟಿಸಿ ಮನವಿ ಮಾಡಿದೆ.
ಚುನಾವಣೆ ಡ್ಯೂಟಿಗೆ ಹೋಗಲಿರುವ ಬಸ್ಗಳ ಸಂಖ್ಯೆ
ರಾಜ್ಯದಲ್ಲಿ ಒಟ್ಟು 8100 ಕೆಎಸ್ಆರ್ಟಿಸಿ ಬಸ್ಗಳಿದ್ದು, ಈ ಪೈಕಿ 3700 ಬಸ್ಗಳು ಚುನಾವಣಾ ಡ್ಯೂಟಿಗೆ ಬುಕ್ ಆಗಿವೆ. ಮೇ 9 ಮತ್ತು 10 ರಂದು 4400 ಕೆಎಸ್ಆರ್ಟಿಸಿ ಬಸ್ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.