ಚುನಾವಣೆ ಘೋಷಣೆ ನಂತರ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿ ತಪಾಸಣೆ ನಡೆಸಿ ಅಕ್ರಮವಾಗಿ ಅಥವಾ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ವಸ್ತುಗಳನ್ನು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ಒಟ್ಟು 230 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 105 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.
ಇಂದು ಸಹ ಹಣ ಸಾಗಾಟದ ಬಗ್ಗೆ ನಿಗಾ ಇಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಈವರೆಗೆ 53,406 ವ್ಯಕ್ತಿಗಳ ವಿರುದ್ಧ ಬಾಂಡ್ ಓವರ್ ಮಾಡಲಾಗಿದೆ. ಭದ್ರತಾ ಪ್ರಕರಣ ಉಲ್ಲಂಘಿಸಿದ 115 ಪ್ರಕರಣ ದಾಖಲಿಸಲಾಗಿದೆ. 1.57 ಕೋಟಿ ಹಣ ಮುಟ್ಟುಗೋಲುಗೆ ಕ್ರಮ ಕೈಗೊಳ್ಳಲಾಗಿದೆ. 714 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಹಣ ಎಷ್ಟು ಗೊತ್ತಾ?
ಬೆಂಗಳೂರು ನಗರದಲ್ಲಿ ಚುನಾವಣೆ ಘೋಷಣೆ ನಂತರ ಈವರೆಗೆ ಒಟ್ಟು 10,93,97,005 ರೂ ನಗದು ವಶಕ್ಕೆ ಪಡೆಯಲಾಗಿದೆ ಎಂದು ಶರಣಪ್ಪ ಹೇಳಿದ್ದಾರೆ. ಈವರೆಗೆ ಒಟ್ಟು 28.5 ಕೆಜಿ ಬಂಗಾರ, 140 KG ಬೆಳ್ಳಿ, 9,72,87,071 ಮೌಲ್ಯದ ಉಚಿತ ಉಡುಗೊರೆಗಳು, 29,51,54,780 ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.