ಬೆಂಗಳೂರು: ಮೇ 8ರ ಸಂಜೆ 6 ಗಂಟೆಯಿಂದ ಮೇ 11ರ ಸಂಜೆ ಆರು ಗಂಟೆಯವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. (Karnataka Assembly Election)ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ನೆ ಜಾರಿ ಮಾಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿಯುತ ಮತದಾನದ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಸಿಲಾಗಿದೆ. ಮೇ 8ರ ಸಂಜೆ 6 ಗಂಟೆಯಿಂದ ಮೇ 11ರ ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆ ಸಮಯದಲ್ಲಿ ಐದು ಜನರಿಗೆ ಮೇಲ್ಪಟ್ಟು ಗುಂಪು ಸೇರುವಂತಿಲ್ಲ, ಮತದಾನ ಕೇಂದ್ರದಲ್ಲಿ ಮತದಾರರು ಹೊರತುಪಡಿಸಿ ಉಳಿದವರು ಸೇರುವಂತಿಲ್ಲ, ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ನಡೆಸುವಂತಿಲ್ಲ, ಮನೆ ಮೆನೆಗೆ ತೆರಳಿ ಪ್ರಚಾರ ನಡೆಸಲು 10 ಜನರಿಗೆ ವಿನಾಯಿತಿಗೊಳಿಸಿ ಆದೇಶ ನೀಡಲಾಗಿದೆ. ಈ ಅವಧಿಯಲ್ಲಿ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಹಿಸತಕ್ಕದಲ್ಲ ಎಂದು ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ.