ಬೆಂಗಳೂರು: ಚುನಾವಣಾ ಪ್ರಕ್ರಿಯೆಗೆ(Assembly Election) ನಿಯೋಜನೆಗೊಂಡು ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣೆ ಆಯೋಗ ಮುಂದಾಗಿದೆ. ಗೈರಾದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಯೋಗ ಮುಂದಾಗಿದ್ದು, ಕರ್ತವ್ಯಕ್ಕೆ ಗೈರಾದ ಸಿಬ್ಬಂದಿ ಮೇಲೆ FIR ದಾಖಲಿಸಲು ನಿರ್ಧಾರ ಮಾಡಲಾಗಿದೆ.
ಯಾರೆಲ್ಲಾ ಗೈರಾಗಿದ್ದಾರೆ ಅವರ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕರ್ತವ್ಯ ಲೋಪ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಯೋಗ ಮುಂದಾಗಿದೆ. ಇನ್ನೂ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ ಮತದಾನ ನಡೆಯಲಿದ್ದು, ಮೇ 10 ರಂದು ಮತ ಎಣಿಕೆ ನಡೆಯಲಿದೆ.