ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election )ಮೇ. 10 ರ ನಾಳೆ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಈ ಬಾರಿ 9.17 ಲಕ್ಷ ಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟ 1.25 ಲಕ್ಷಕ್ಕೂ ಹೆಚ್ಚು ಜನರು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 41,000 ಅರ್ಜಿದಾರರು ಏಪ್ರಿಲ್ 1ಕ್ಕೆ 18 ವರ್ಷಕ್ಕೆ ಕಾಲಿಟ್ಟಿದ್ದು, ಇವರು ಈ ಬಾರಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾ ರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು. ತೃತೀಯ ಲಿಂಗಿ 4,669, ಶತಾಯುಷಿ 16,976, 80 ವರ್ಷ ಮೇಲ್ಪಟ್ಟವರು 12,15,763, ವಿಶೇಷ ಚೇತನರು 5,55,073, ಸೇವಾ 47,779 ಮತ್ತು 9,17,241 ಮೊದಲ ಬಾರಿಯ ಮತದಾರರಾಗಿದ್ದಾರೆ.
1.54 ಲಕ್ಷ ಪೊಲೀಸ್ ಸಿಬ್ಬಂದಿಗಳ ನಿಯೋಜನೆ
ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಹೊರ ರಾಜ್ಯಗಳಿಂದ 8,500 ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ನೇಮಿಸಲಾಗಿದೆ