ಯಾದಗಿರಿ: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರಿನಲ್ಲಿ ಮತಗಟ್ಟೆಗೆ ಆಗಮಿಸಿದ 105 ವರ್ಷದ ದೇವಕ್ಕಮ್ಮ ಸಿದ್ದರಾಮರೆಡ್ಡಿ ಅವರು ತಮ್ಮ ಮೊಮ್ಮಗನ ಮೊದಲ ಮತದಾರರಾಗಿ ಬಂದು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು.
ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.