ಚಿಕ್ಕಮಗಳೂರು : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮದುವೆಗೂ ಮುನ್ನ ಚಿಕ್ಕಮಗಳೂರಿನ ಮತಗಟ್ಟೆ ಸಂಖ್ಯೆ 165ರಲ್ಲಿ ತನ್ನ ಕುಟುಂಬ ಸಮೇತರಾಗಿ ಬಂದ ವಧು ಮತ ಚಲಾಯಿಸಿ ಸಂಭ್ರಮಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ.