ಬೆಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಜೊತೆ ಬಂದು ಮತದಾನ ಮಾಡಿದರು. ಆರ್ ಆರ್ ನಗರದ ಮೌಂಟ್ ಕಾರ್ಮೆಲ್ ಸ್ಕೂಲ್ ಗೆ ಬಂದ ನಟ ಗಣೇಶ್ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಎಲ್ಲರ ಬಳಿ ಮತದಾನ ಮಾಡುವಂತೆ ಅವರು ಕೋರಿದ್ದಾರೆ.