ರಾಮನಗರ: ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು.
ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಎಚ್ಡಿಕೆ ಮತದಾನ ಮಾಡಿದರು. ಕೇತಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ರಲ್ಲಿ ಮತ ಚಲಾಯಿಸಿದರು.
ಮಾಜಿ ಸಿಎಂ ಎಚ್ಡಿಕೆಗೆ ಮಾಗಡಿ ಶಾಸಕ ಎ.ಮಂಜುನಾಥ್ ಸಾಥ್ ನೀಡಿದರು. ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಿದ್ದಾರೆ. ಎ.ಮಂಜುನಾಥ್ ಆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಶೇ. 20.94% ರಷ್ಟು ಮತದಾನ ನಡೆದಿದ್ದು ಕೇವಲ 4 ಗಂಟೆಗಳಲ್ಲಿ ಈ ಸಂಖ್ಯೆಯನ್ನು ತಲುಪಿದ್ದು ಉತ್ತಮ ಸ್ಟಾರ್ಟ್ ಆಗಿದೆ. ಬೆಂಗಳೂರು ಉತ್ತರ ಶೇ 17.50 % ಮತದಾನ ನಡೆದಿದ್ದು, ಬೆಂಗಳೂರು ದಕ್ಷಿಣ 19.18 % ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ನಲ್ಲಿ 19.30 % ಮತದಾನ ದಾಖಲಾಗಿದ್ದು, ಬೆಂಗಳೂರು ಗ್ರಾಮೀಣ ಭಾಗದಲ್ಲಿ 20.23 % ಮತದಾನವಾಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿ 17.72 % ಮತದಾನವಾಗಿದೆ.