ಚೆನ್ನೈ: DMK ಫೈಲ್ಸ್ ರಿಲೀಸ್ ಮಾಡಿದ್ದು ಭ್ರಷ್ಟಾಚಾರದ ಆರೋಪ ಹೊರಿಸಿದ್ದ ರಾಜ್ಯ ಬಿಜೆಪಿ (BJP) ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರವು (Tamil Nadu Government) ಬುಧವಾರದಂದು ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಅಣ್ಣಾಮಲೈ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಮಾನಹಾನಿ ಪ್ರಚೋದನೆ ಮಾಡುತ್ತಿದ್ದಾರೆಂದು ಪಕ್ಷ ಆರೋಪಿಸಿದೆ.
2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು MK ಸ್ಟಾಲಿನ್ಗೆ 200 ಕೋಟಿ ರೂ. ನೀಡಲಾಗಿದೆ ಎಂದು ಅಣ್ಣಾಮಲೈ ಇತ್ತೀಚೆಗೆ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು 1.34 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವನ್ನೂ ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ ಅಲ್ಲದೇ ಮುಖ್ಯಮಂತ್ರಿ ಅವರ ಕುಟುಂಬ ಸದಸ್ಯರು ರಾಜ್ಯದಲ್ಲಿಯೇ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಅಣ್ಣಾಮಲೈ ಆರೋಪಿಸಿದ್ದರು.
ಈ ಬಗ್ಗೆ ವಾಗ್ದಾಳಿ ನಡೆಸಿರುವ DMK ವಕ್ತಾರ ಟಿಕೆಎಸ್ ಇಳಂಗೋವನ್, ಅಣ್ಣಾಮಲೈ ಅವರಿಗೆ ತಕ್ಕ ಶಿಕ್ಷೆ ನೀಡುವುದೇ ಉತ್ತಮ ಕ್ರಮ. ಇದಕ್ಕೆ ಹೋಲಿಸಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನೂ ಹೇಳಿರಲಿಲ್ಲ ಅವರೇ ಎಷ್ಟೋ ವಾಸಿ ಆದರೂ ಅವರನ್ನು ಅನರ್ಹಗೊಳಿಸಲಾಗಿದೆ. ಇದೀಗ ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡಲು ಬೇಕಾದಷ್ಟು ಕಾರಣಗಳಿವೆ ಇದನ್ನು ಗಮನಿಸಿ ಎಂದಿದ್ದಾರೆ .
ಈ ಹಿಂದೆ DMKಯ ಲೀಗಲ್ ನೋಟಿಸ್ ಬಳಿಕ ಅಣ್ಣಾಮಲೈ ಕ್ಷಮೆಯಾಚಿಸಲು ನಿರಾಕರಿಸಿದ್ದು, ಅವರು ಈ ಪ್ರಕರಣವನ್ನು ನ್ಯಾಯಾಲಯದಲ್ಲಿಯೇ ಎದುರಿಸಲಿದ್ದಾರೆ ಎಂದು BJP ತಿಳಿಸಿದೆ.