ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್ಆರ್ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ,
ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬನವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸಂಜೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಮನಗರ, ಕೋಲಾರ, ಯಾದಗಿರಿ, ತುಮಕೂರಿನ ಹಲವಡೆಯೂ ಮಳೆ ಆಗಿದೆ. ಬೀದರ್, ರಾಯಚೂರು, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಆಗುವ ಸಂಭವ ಇದೆ. ಕಲಬುರಗಿಯಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.