ಬೆಂಗಳೂರು: ಜೆಡಿಎಸ್ನೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ, ನಾವು 146 ಸ್ಥಾನ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(KPCC President DK Sivakumar) ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದ ಮತದಾರರು ಪ್ರಜ್ಞಾವಂತರು. ಅವರು ಡಬಲ್ ಇಂಜಿನ್ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್ ಬಗ್ಗೆ ಆಶಾವಾದಿಯಾಗಿದ್ದಾರೆ. ಈ ಬಾರಿ ಕಾಂಗ್ರೆಸ್ಗೆ ಸಂಖ್ಯಾಬಲ ಇರುವುದರಿಂದ ಸರ್ಕಾರ ರಚಿಸಲು ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಇತರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಇಲ್ಲ” ಎಂದು ತಿಳಿಸಿದರು.
2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಬಿಜೆಪಿಯನ್ನು ದೂರವಿಟ್ಟು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೆವು. ಆದರೆ, ಕೆಲವು ಶಾಸಕರು ಬಂಡಾಯ ಎದ್ದು ಮೈತ್ರಿ ಪಕ್ಷ ತೊರೆಯುವ ಮೂಲಕ ಸರ್ಕಾರವನ್ನು ಪತನಗೊಳಿಸಿದ್ದರು. ಆದರೆ ಈ ಬಾರಿ ಹಾಗಾಗುವುದಿಲ್ಲ. ಕಾಂಗ್ರೆಸ್ ಹಲವು ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಿದೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, 40 ಪರ್ಸೆಂಟ್ ಕಮಿಷನ್, ಪಿಎಸ್ಐ ಹಗರಣ, ಅಡುಗೆ ಅನಿಲ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದ್ದೇವೆ, ನಾವೇ ಸರ್ಕಾರ ರಚಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು..