ವಿಜಯನಗರ: ಹರಪನಹಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದ್ದು, ಭಾರಿ ಪ್ರಮಾಣದಲ್ಲಿ ಗಾಳಿ ಬಿಸಿದೆ. ಈ ಹಿನ್ನಲೆ ಮರಗಳು ನೆಲಕ್ಕಿರುಳಿದಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ ಅಕಾಲಿಕ ಮಳೆಗೆ ನೆಲಕಚ್ಚಿದ್ದು, ರೈತ ಕಂಗಾಲಾಗಿದ್ದಾನೆ. ಇನ್ನು ಈ ಕುರಿತು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಮಳೆ ಸಹಿತ ಬಿರುಗಾಳಿ; ಸರ್ಕಾರಿ ಶಾಲೆಯಲ್ಲಿ ಬಿದ್ದ ಬೃಹತ್ ಮರ
ಕಲಬುರಗಿ: ಜಿಲ್ಲೆಯಲ್ಲಿ ಮೇ.9ರಂದು ಸಂಜೆ ಬಾರಿ ಬಿರುಗಾಳಿ ಸಹಿತ ಮಳೆಯಾಗಿತ್ತು. ಈ ಕಾರಣ ನಗರದ ಕೋಟನೂರು ಡಿ ಬಡಾವಣೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿತ್ತು. ಅದು ಅಲ್ಲದೆ ನಿನ್ನೆ ಚುನಾವಣೆ ನಿಮಿತ್ತ ಕೆಲಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಧೀಡಿರನೆ ಮರ ಬಿದ್ದಿದೆ. ಇದರಿಂದ ಕೆಲಹೊತ್ತು ಸಿಬ್ಬಂಧಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಬಸ್ ಮೇಲೆ ಧರೆಗುರುಳಿದ ಬೃಹತ್ ಮರ: ಯುವತಿ ಗಂಭೀರ
ಗದಗ: ಭಾರಿ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿದಿದ್ದಿತ್ತು. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಬಳಿ ಘಟನೆ ನಡೆದಿತ್ತು. ಬಸ್ನಲ್ಲಿದ್ದ ಯುವತಿಗೆ ಗಂಭೀರವಾದ ಗಾಯವಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಗಜೇಂದ್ರಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿತ್ತು.