ಮಹಾರಾಷ್ಟ್ರದ (Maharashtra) 16 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ತೀರ್ಪು ಇಂದು ಪ್ರಕಟಿಸುವ ಸಾಧ್ಯತೆ ಇದೆ. ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನೆಯ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್ನ ತೀರ್ಪಿನ ಮುನ್ನ ಮಾತನಾಡಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್,
ಯಾವುದೇ ನಿರ್ಧಾರ ಹೊರಬಿದ್ದರೂ ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಬಹುಮತವಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳ ಅರ್ಜಿಗಳ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ವರ್ಷದ ಮಾರ್ಚ್ನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು, ಇದರಲ್ಲಿ ಠಾಕ್ರೆಯವರ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿದೆ.
ಲಂಡನ್ಗೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ನರ್ವೇಕರ್, ನಾನು ಸ್ಪೀಕರ್ ಆದ ನಂತರ ಈ ಸರ್ಕಾರವು ವಿಶ್ವಾಸಮತ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ. ಯಾವುದೇ ನಿರ್ಧಾರ ಹೊರಬರಲಿ, ಸಂಖ್ಯಾಬಲದ ಮೇಲೆ ಈ ಸರ್ಕಾರಕ್ಕೆ ಬಹುಮತವಿದೆ ಎಂದು ನಾರ್ವೇಕರ್ ಹೇಳಿದ್ದಾರೆ. ಕಳೆದ ವರ್ಷ ಜೂನ್ನಲ್ಲಿ, ಶಿಂಧೆ ಮತ್ತು 39 ಶಾಸಕರು ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದರು, ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ (ಎನ್ಸಿಪಿ ಮತ್ತು ಕಾಂಗ್ರೆಸ್ ಅನ್ನು ಸಹ ಒಳಗೊಂಡಿದೆ) ಪಕ್ಷದ ವಿಭಜನೆ ಮತ್ತು ಪತನಕ್ಕೆ ಕಾರಣವಾಯಿತು. ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿಂಧೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು.