ಕೋಲಾರ: ನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲೂಕಿನ ಮಲ್ಲನೂರು ಗ್ರಾಮದಲ್ಲಿ ನಡೆದಿದೆ. ಆನೆ ಹಾವಳಿಗೆ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಪತಿಚೇನು ಗ್ರಾಮದ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬುವ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿದ್ದಾರೆ.
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಎರಡು ರಾಜ್ಯಗಳ ಗಡಿ ಗ್ರಾಮಗಳಲ್ಲಿ ಆನೆ ಹಾವಳಿಯಿಂದಾಗಿ ಗ್ರಾಮಸ್ಥರು ಮನೆಯಿಂದ ಆಚೆ ಬರಲು ಕೂಡ ಆತಂಕ ಪಡುವಂತಾಗಿದೆ.