ಪ್ರಭಾಸ್ ಮತ್ತು ಕೃತಿ ಸನೂನ್ ನಟನೆಯ ‘ಆದಿಪುರುಷ’ ಸಿನಿಮಾ ಒಂದಲ್ಲ ಒಂದು ಕಾರಣಕ್ಕೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಲೆ ಇರುತ್ತದೆ. ಟ್ರೈಲರ್ ರಿಲೀಸ್ ಆದಾಗ ಹಾಗೂ ಪೋಸ್ಟರ್ ಬಿಡುಗಡೆ ಆದಾಗ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಚಿತ್ರದ ಮೇಲಿತ್ತು. ಇದೀಗ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಹೊತ್ತಲ್ಲೇ ಚಿತ್ರತಂಡದ ಮೇಲೆ ದೂರು ದಾಖಲಾಗಿದೆ.
ಸಂಜಯ್ ತಿವಾರಿ ಎಂಬುವವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈಗಾಗಲೇ ರಿಲೀಸ್ ಆದ ಪೋಸ್ಟರ್ ನಲ್ಲಿ ನಿರ್ಮಾಪಕರು ಮತ್ತು ಕಲಾವಿದರು ಗಂಭೀರ ತಪ್ಪುಗಳನ್ನು ಮಾಡಿದ್ಧಾರೆ. ಈ ತಪ್ಪುಗಳು ನಾಳೆ ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಹುದು. ಅಲ್ಲದೇ, ಒಂದು ವರ್ಗದ ಜನರ ಧಾರ್ಮಿಕ ಭಾವನೆಗೂ ನೋವನ್ನುಂಟು ಮಾಡಬಹುದು. ಹಾಗಾಗಿ ಸಿನಿಮಾದಲ್ಲಿ ಅಂತಹ ತಪ್ಪುಗಳು ಕಾಣದಂತೆ ನಿರ್ದೇಶನ ನೀಡಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
`ಆದಿಪುರುಷ್’ ಚಿತ್ರಕ್ಕಾಗಿ ಕಾಯ್ತಿರುವ ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ವರ್ಷವೇ ವಾರಿಸು, ತುನಿವು ಜೊತೆ `ಆದಿಪುರುಷ್’ ಚಿತ್ರ ತೆರೆಕಾಣಬೇಕಿತ್ತು. ಚಿತ್ರದ ಟೀಸರ್ಗೆ ಕಳಪೆ ಎಂದು ನೆಟ್ಟಿಗರಿಂದ ಉತ್ತರ ಬಂದ್ಮೇಲೆ ರಿಲೀಸ್ ಡೇಟ್ ಮುಂದಕ್ಕೆ ಹಾಕಲಾಗಿತ್ತು. ಈಗ ರಿಲೀಸ್ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ.
`ಆದಿಪುರುಷ್’ ಸಿನಿಮಾದ ಟೀಸರ್ಗೆ ಕಳಪೆ ಗ್ರಾಫಿಕ್ಸ್ ವರ್ಕ್ ನೋಡಿ, ನೆಟ್ಟಿಗರಿಂದ ಚಿತ್ರತಂಡಕ್ಕೆ ಭಾರಿ ಟೀಕೆ ಎದುರಿಸಿತ್ತು. ಹಾಗಾಗಿ ಒಂದಿಷ್ಟು ಬದಲಾವಣೆಯೊಂದಿಗೆ ಬರುತ್ತೇವೆ ಎಂದು ತಿಳಿಸಿದ್ದರು. ಅದರಂತೆಯೇ ಈಗ ಜೂನ್ 16, 2023ರಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕ ಓಂ ರೌತ್ ಹೇಳಿದ್ದಾರೆ.