ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣ ಕಾಣುತ್ತಿದೆ, ಮತ್ತೆ ನಾವೇ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಗ್ರೌಂಡ್ ರಿಪೋರ್ಟ್ ತಂದಿದ್ದೇವೆ. ನಮಗೆ ಮ್ಯಾಜಿಕ್ ನಂಬರ್(magic number) ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸಲ್ಲ. ಕೇಂದ್ರದ ನಾಯಕರಿಗೆ ನಾನೇ ವಾಸ್ತವ ಸ್ಥಿತಿಯನ್ನು ತಿಳಿಸಿದ್ದೇನೆ. ಕೇಂದ್ರದ ನಾಯಕರಿಗೂ ಬಹುಮತ ಬರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.