ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಜೆಡಿಎಸ್(JDS) ಪಕ್ಷ ಕಿಂಗ್ ಮೇಕರ್ ಆಗಲಿದೆ ಎಂದು ಸಿ.ಎಂ. ಇಬ್ರಾಹಿಂ(CM Ibrahim) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಸರ್ವೆ ಮಾಡಿಸಿವೆ. ಆದರೆ ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಮದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ.
ಜನರಲ್ಲಿ ಗೊಂದಲ(Karnataka Election) ಸೃಷ್ಟಿಸುವ ಕೆಲಸವನ್ನು ರಾಷ್ಟ್ರೀಯ ಪಕ್ಷಗಳು ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ. ಈ ಬಾರಿ ಜೆಡಿಎಸ್ ಪಕ್ಷವೇ ಕಿಂಗ್ ಮೇಕರ್ ಆಗಲಿದೆ ಎಂದು ಬೆಂಗಳೂರಿನ ನಿವಾಸದಲ್ಲಿ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ.