ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡುತ್ತಾರೆ. ಬೆಂಗಳೂರು ದಕ್ಷಿಣ 7 ಕ್ಷೇತ್ರಗಳ ಅಂಚೆ ಮತದಾನ ಆರಂಭವಾಗಿದೆ. ಶಿವಾಜಿನಗರ, ರಾಜಾಜಿನಗರ ಹಾಗೂ ಚಿಕ್ಕಪೇಟೆಯಲ್ಲಿ ಅಂಚೆ ಮತ ಎಣಿಕೆ ಶುರುವಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಮೇ.10 ರಂದು 224 ವಿಧಾಸಭೆಗಳಿಗೆ ಮತದಾನ (Voting) ನಡೆದಿದ್ದು ಇಂದು ಮತ ಎಣಿಕೆ (Vote Counting) ಆರಂಭವಾಗಲಿದೆ.
ಇನ್ನು ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲಿನಲ್ಲಿ ನಿಂತಿದ್ದು, ಈ ಬಾರಿ ನಾವು ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸದಲ್ಲಿವೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 310, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 567, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 385, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 746, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 1610, ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ 497, ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 474 ಅಂಚೆ ಮತದಾನವಾಗಿದೆ. ಒಟ್ಟು 4589 ಅಂಚೆ ಮತಗಳು ಎಣಿಕೆಯಾಗಲಿವೆ.