ಚಿಕ್ಕಬಳ್ಳಾಪುರ: ಇಡೀ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಮುನ್ನಡೆ ಸಾಧಿಸಿದ್ದಾರೆ.
ಆಂಧ್ರ ಗಡಿಗೆ ಹೊಂದಿಕೊಂಡಂತಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ವೇಳೆ, ಹಣ, ಜಾತಿ, ಅಭಿವೃದ್ಧಿ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದಿದ್ದವು. ಆರಂಭದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಕೆ. ಸುಧಾಕರ್ ಜಯಭೇರಿ ಬಾರಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದ ಸುಧಾಕರ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ಎದುರಾಯ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಡಾ. ಕೆ. ಸುಧಾಕರ್, ರಾಜ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.