ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತ ಏಣಿಕೆ ಈಗಾಗಲೇ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿಗಳು ರೆಸಾರ್ಟ್ಗೆ ಹೊರಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ‘ಕೈ’ ನಾಯಕರಿಗೆ ಆಪರೇಷನ್ ಭಯ ಕಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನಡೆ ಸಾಧಿಸಿರುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ 2 ಹೋಟೆಲ್ಗಳನ್ನು ಬುಕ್ ಮಾಡಿದೆ.
ಈ ಮೂಲಕ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಸದ್ದು ಮಾಡುತ್ತಿದೆ. 2023ರ ಕರ್ನಾಟಕ ಚುನಾವಣೆಯ ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ.