ವಿಜಯನಗರ- ಹರಪನಹಳ್ಳಿ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಹಿರಿಯ ಮಗಳು ಎಂ.ಪಿ ಲತಾ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಎಂ.ಪಿ.ಲತಾ ಅವರು ಒಟ್ಟು 64589 ಮತ ಗಳಿಸಿ ಸತತ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಕರುಣಾಕರರೆಡ್ಡಿ 50939 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಕೊಟ್ರೇಶ್ 20292 ಮತಗಳನ್ನು ಪಡೆದಿದ್ದಾರೆ
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಹರಪನಹಳ್ಳಿಯೂ ಒಂದು. ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಪಿ ಲತಾ ಅವರು, ನಿರಂತರ ಪಕ್ಷ ಸಂಘಟನೆ ಹಾಗೂ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದಾಗ, ತಮಗೆ ಟಿಕೆಟ್ ಸಿಗಬಹುದು ಎಂಬ ಪ್ರಬಲ ನಿರೀಕ್ಷೆಯಲ್ಲಿದ್ದರು. ಆದರೆ, ನಿರೀಕ್ಷೆ ಹುಸಿಗೊಳಿಸಿದ ಕಾಂಗ್ರೆಸ್, ಎನ್.ಕೊಟ್ರೇಶಿ ಅವರಿಗೆ ಮಣೆ ಹಾಕಿತು. ಇದರಿಂದ ಮುನಿಸಿಕೊಂಡ ಲತಾ, ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದರು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.