ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಬಗ್ಗೆ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಗಿಫ್ಟ್ ನೀಡುತ್ತೋ, ಇಲ್ಲವೋ ಗೊತ್ತಿಲ್ಲ, ಆದರೆ ರಾಜ್ಯದ ಜನರು ನನ್ನ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ನಾನು ದೆಹಲಿಗೆ ಹೋಗುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಸಿಎಂ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಸಿಎಂ ಆಯ್ಕೆ ಬಗ್ಗೆ ನಮ್ಮ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ಒನ್ ಲೈನ್ ರೆಸ್ಯೂಲೇಷನ್ ಪಾಸ್ ಮಾಡಿದ್ದೇವೆ. ಸಿಎಂ ಆಯ್ಕೆ ಬಗ್ಗೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಮಾಡಲಿದ್ದಾರೆ.