ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ಉದ್ಯಮಿಯೊಬ್ಬರು ಲೈಂಗಿಕ (sexually) ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ವಿರುದ್ಧ ಮೈಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ದೂರು ನೀಡಲಾಗಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾರೆ. ಉದ್ಯಮಿ ತನ್ನ ಕಾರಿನಲ್ಲಿ ಕಿರುಕುಳ ನೀಡುವಾಗ ಯುವತಿ ಕಿರುಚಾಡಿ ಕಾರಿನಿಂದ ಹೊರಬಂದಿದ್ದಾರೆ. ಬೈಕ್ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ. ತನ್ನ ಸೂಪರ್ ಮಾರ್ಕೇಟ್ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಆರೋಪ ಸಹ ಮಹಿಳೆ ಮಾಡಿದ್ದಾರೆ.